ಕಾರವಾರ: ರೈಲಿಗೆ ತಲೆ ಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಟ್ಕಳ ತಾಲೂಕಿನ ಬೆಳಕೆ ಬಳಿ ನಡೆದಿದೆ.
ಬೆಳಕೆಯ ಮೊಗೇರಕೇರಿಯ ಭರತ್ ಮೊಗೇರ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಇಂದು ಮುಂಜಾನೆ ರೈಲೆಗೆ ತಲೆ ಕೊಟ್ಟ ಪರಿಣಾಮ ರುಂಡ ಮುಂಡ ಬೇರೆ ಬೇರೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿರುವ ರೈಲ್ವೆ ಪೊಲೀಸರು, ಭಟ್ಕಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.