ETV Bharat / state

ಕಾರವಾರ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಸೋದರ ಮಾವ ಅರೆಸ್ಟ್​​ - ಹೆಗ್ಗೆಕೊಪ್ಪ ಅತ್ಯಾಚಾರ ಪ್ರಕರಣ

ಸೊಸೆಯನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗಿ ಬಿಡುವುದಾಗಿ ಹೇಳಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

young-man-arrested-in-minor-rape-case
ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಸೋದರ ಮಾವ ಅರೆಸ್ಟ್​​
author img

By

Published : Aug 26, 2021, 10:59 PM IST

Updated : Aug 26, 2021, 11:07 PM IST

ಕಾರವಾರ: ಸೋದರ ಮಾವನೋರ್ವ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಸಿದ್ದಾಪುರ ತಾಲೂಕಿನ ಹೆಗ್ಗೆಕೊಪ್ಪದಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಆರೋಪಿ ಕಮಲಾಕರ ಮಡಿವಾಳ (27) ಎಂಬಾತನನ್ನು ಬಂಧಿಸಲಾಗಿದೆ.

ಈತ ತನ್ನ ಸೊಸೆಯನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗಿ ಬಿಡುವುದಾಗಿ ಹೇಳಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪಾಲಕರು ದೂರು ದಾಖಲಿಸಿದ್ದು, ಸಿದ್ಧಾಪುರ​ ಠಾಣೆ ಪೊಲೀಸರು ಆರೋಪಿಯನ್ನು ತಕ್ಷಣ ಬಂಧಿಸಿ ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕೋರ್ಟ್​ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಈ ಬಗ್ಗೆ ಸಿದ್ಧಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Video Call ಮಾಡುವ ಮುನ್ನ ಎಚ್ಚರ.. ಎಚ್ಚರ.. ಯುವತಿ ಜೊತೆ ಬೆತ್ತಲಾದ ಯುವಕನ ವಿಡಿಯೋ ವೈರಲ್​

Last Updated : Aug 26, 2021, 11:07 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.