ಕಾರವಾರ: ಪ್ರವಾಸಿಗರಿಗೆ ಮಾರಾಟ ಮಾಡುವ ಉದ್ದೇಶದಿಂದ ಸುಮಾರು ಒಂದು ಕೆ.ಜಿ. ತೂಕದ ಗಾಂಜಾ ಸಾಗಾಟ ಮಾಡುತ್ತಿದ್ದ ಯುವಕನೋರ್ವನನ್ನು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ತಾರಮಕ್ಕಿ ಬಳಿ ಪೊಲೀಸರು ಬಂಧಿಸಿದ್ದಾರೆ.
ತಾರಮಕ್ಕಿಯ ಶಂಕರ ಗೌಡ ಎಂಬಾತ ಬಂಧಿತ ಆರೋಪಿ. ಈತ ಸುಮಾರು 1 ಕೆಜಿ 107 ಗ್ರಾಂ ತೂಕದ ಗಾಂಜಾವನ್ನು ಪ್ರವಾಸಿಗರಿಗೆ ಮಾರಾಟ ಮಾಡುವ ಉದ್ದೇಶದಿಂದ ಬೈಕ್ನಲ್ಲಿ ಸಾಗಿಸುತ್ತಿದ್ದ. ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಆರೋಪಿಯನ್ನು ತಡೆದು ಪರಿಶೀಲಿಸಿದಾಗ ಪತ್ತೆಯಾಗಿದೆ.
ಗಾಂಜಾ ಮೌಲ್ಯ ಸುಮಾರು 20 ಸಾವಿರ ಎಂದು ಅಂದಾಜಿಸಲಾಗಿದ್ದು, ಬೈಕ್ ಸೇರಿ ಸುಮಾರು 62 ಸಾವಿರ ರೂ. ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆ ವೇಳೆ ಪಿಎಸ್ಐ ನವೀನ್ ಕುಮಾರ್ ಸೇರಿದಂತೆ ಸಿಬ್ಬಂದಿ ಇದ್ದರು. ಈ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.