ETV Bharat / state

ಅರಣ್ಯ ಇಲಾಖೆ ವಾಹನದ ಮೇಲೆ ಯುವತಿ ಫೋಟೋ ಶೂಟ್: ಸಾಮಾಜಿಕ ಜಾಲತಾಣದಲ್ಲಿ ವೈರಲ್...

ವಾಹನ ದುರ್ಬಳಕೆ ಮಾಡಲಾಗಿದೆ ಎಂಬ ಆಕ್ಷೇಪ ಹೆಚ್ಚಿದಂತೆ, ಎಚ್ಚೆತ್ತ ಇಲಾಖೆ ಅಧಿಕಾರಿಗಳು, ಪೋಟೋ ಶೂಟ್ ಮಾಡಿಸಿಕೊಂಡವರ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

author img

By

Published : Nov 28, 2020, 8:07 PM IST

shoot-on-forest-department-vehicle-viral
ಅರಣ್ಯ ಇಲಾಖೆ ವಾಹನದ ಮೇಲೆ ಯುವತಿ ಫೋಟೋ ಶೂಟ್

ಶಿರಸಿ: ಯಲ್ಲಾಪುರ ಕೆನರಾ ಅರಣ್ಯ ವೃತ್ತ ಅರಣ್ಯ ಇಲಾಖೆ ವಾಹನದ ಮೇಲೆ ಯುವತಿಯೊಬ್ಬಳು ವಿವಿಧ ಭಂಗಿಗಳಲ್ಲಿ ಫೋಟೋ ಶೂಟ್ ಮಾಡಿಸಿಕೊಂಡಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಅರಣ್ಯ ಇಲಾಖೆ ವಾಹನದ ಮೇಲೆ ಯುವತಿ ಫೋಟೋ ಶೂಟ್

ಯುವತಿ ಯಲ್ಲಾಪುರ ತಾಲೂಕಿನ ಮಂಚಿಕೇರಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯ ವಾಹನದ ಮೇಲೆ ಕುಳಿತುಕೊಂಡು ಫೋಟೋ ತೆಗೆಸಿಕೊಂಡಿದ್ದಾಳೆ. ಕೆಎ-31-ಜಿ-0275 ಸಂಖ್ಯೆಯ ಬೊಲೆರೋ ವಾಹನದ ಮೇಲೆ ವಿವಿಧ ಭಂಗಿಯಲ್ಲಿ ಯುವತಿ ಛಾಯಾಚಿತ್ರ ತೆಗೆಸಿಕೊಂಡಿದ್ದಾಳೆ.

ಈ ರೀತಿ ಸರ್ಕಾರಿ ವಾಹನ ದುರ್ಬಳಕೆ ಮಾಡಿಕೊಂಡಿರುವ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ.‌ ವಾಹನ ದುರ್ಬಳಕೆ ಮಾಡಲಾಗಿದೆ ಎಂಬ ಆಕ್ಷೇಪ ಹೆಚ್ಚಿದಂತೆ, ಎಚ್ಚೆತ್ತ ಇಲಾಖೆ ಅಧಿಕಾರಿಗಳು, ಪೋಟೋ ಶೂಟ್ ಮಾಡಿಸಿಕೊಂಡವರ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವಾಹನದ ಚಾಲಕ ಬೇರೆ ವಾಹನ ತೆಗೆದುಕೊಂಡು ಮುಂಡಗೋಡಿಗೆ ತೆರಳಿದ್ದ. ಆ ಸಂದರ್ಭದಲ್ಲಿ ರಸ್ತೆಯಲ್ಲಿ ಬಂದವರ್ಯಾರೋ ವಾಹನದ ಮೇಲೆ ಹತ್ತಿ ಪೋಟೋ ಶೂಟ್ ಮಾಡಿದ್ದಾರೆ. ಈ ಬಗ್ಗೆ ಕ್ರಮ ವಹಿಸಲು ಪ್ರಕರಣ ದಾಖಲಿಸಲಾಗಿದೆ ಎಂದು ಯಲ್ಲಾಪುರ ಡಿಸಿಎಫ್ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಪೊಲೀಸ್​​ ಆಯುಕ್ತರ ಕಚೇರಿಯಲ್ಲಿ ಮಹಿಳಾ ಐಪಿಎಸ್ ಅಧಿಕಾರಿಗಳ ಫೋಟೋ ಶೂಟ್​​​.. ಇವರ್ಯಾರಿಗೂ ಕಮ್ಮಿಯಿಲ್ಲ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.