ಕಾರವಾರ: ಹೊನ್ನಾವರದಲ್ಲಿ ಇತ್ತೀಚೆಗೆ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಭೀಕರ ಕೊಲೆ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಸ್ವಂತ ಅಣ್ಣನನ್ನೇ ಬೇಡ ಅಂದ್ರೂ ತಮ್ಮಂದಿರು ರಾಡ್‌ನಿಂದ ಹಲ್ಲೆ ನಡೆಸಿ, ಕೊಲೆ ಮಾಡಿರುವ ಘಟನೆ ಉತ್ತರಕನ್ನಡದಲ್ಲಿ ನಡೆದಿದೆ.
ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ತೊಟ್ಟಿಲುಗುಂಡಿ ಗ್ರಾಮದಲ್ಲಿ, ನವೆಂಬರ್ 5 ರಂದು ಸಂಜೆ 5 ಗಂಟೆಗೆ ಅಣ್ಣ ತಮ್ಮಂದಿರ ನಡುವೆ ಅಡಕೆ ತೋಟ ಭಾಗ ಮಾಡುವ ವಿಚಾರವಾಗಿ ಜಗಳ ನಡೆದಿತ್ತು. ಈ ವೇಳೆ, ಮಾತಿಗೆ ಮಾತು ಬೆಳೆದು ಸ್ವಂತ ಅಣ್ಣನಾದ ಹನುಮಂತ ನಾಯ್ಕ್ (54) ಎಂಬಾತನ ಮೇಲೆ ತಮ್ಮಂದಿರಾದ ವಿನಾಯಕ ಮತ್ತು ಚಿದಂಬರ ಹಾಗೂ ಮಂಜುನಾಥ ಸೇರಿ ರಾಡ್‌ನಿಂದ ಹಲ್ಲೆ ಮಾಡಿದ್ದಾರೆ.
ಹಲ್ಲೆ ಮಾಡಲು ಮುಂದಾದಾಗ ಬೇಡ ಬೇಡ ಅಂದ್ರು ಕೈಯಲ್ಲಿ ರಾಡ್‌ನಿಂದ ಹಲ್ಲೆ ಮಾಡುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸದ್ಯ ಮೂವರು ಆರೋಪಿಗಳು ನ್ಯಾಯಾಲಯದ ಎದುರು ಶರಣಾಗಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಹುಟ್ಟುಹಬ್ಬದ ವಿಚಾರವಾಗಿ ಸ್ನೇಹಿತರ ನಡುವೆ ಗಲಾಟೆ : ಕೊಲೆಯಲ್ಲಿ ಅಂತ್ಯವಾದ ಜಗಳ