ಕಾರವಾರ: ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋಕರ್ಣದ ಕೋಟಿ ತೀರ್ಥದಲ್ಲಿ ನಡೆದಿದೆ.
ಗೋಕರ್ಣದ ಕೋಟಿತೀರ್ಥದ ನಿವಾಸಿ ಪ್ರಜ್ವಲ್ ಅಂಬೇಕರ್ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಮನೆಯಲ್ಲಿ ಯಾರು ಇಲ್ಲದಾಗ ಮನೆಯ ಜಂತಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಗೋಕರ್ಣ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಾಗಿದೆ.