ವಿಜಯಪುರ: ಇಂದು ಜಿಲ್ಲೆಯಲ್ಲಿ ಒಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ.
30 ವರ್ಷದ ವ್ಯಕ್ತಿಗೆ ಸೋಂಕು ತಗುಲಿದ್ದು , ವ್ಯಕ್ತಿಯನ್ನು P- 1494 ಎಂದು ಗುರುತಿಸಲಾಗಿದೆ. ಆತ ಮಹಾರಾಷ್ಟ್ರದ ಮುಂಬೈಯಿಂದ ವಿಜಯಪುರಕ್ಕೆ ಆಗಮಿಸಿದ್ದಾನೆ. ಇನ್ನು ಇದುವರಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 61 ಕ್ಕೆ ಏರಿಕೆಯಾಗಿದೆ.