ವಿಜಯಪುರ: ಜಿಲ್ಲೆಯಲ್ಲಿ ಇಂದು103 ಜನರಿಗೆ ಕೊರೊನಾ ದೃಢವಾಗಿದ್ದು, ಇಲ್ಲಿವರೆಗೆ ಜಿಲ್ಲೆಯಲ್ಲಿ 7,181 ಜನರಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಇಂದು ಕೊರೊನಾದಿಂದ 75 ಜನ ಗುಣಮುಖರಾಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 6,387ಕ್ಕೆ ಏರಿಕೆಯಾಗಿದೆ. ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 119ಕ್ಕೆ ಏರಿಕೆಯಾಗಿದೆ.
ಜಿಲ್ಲಾಸ್ಪತ್ರೆ ಹಾಗೂ ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 675 ಜನರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. 304 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ತಿಳಿಸಿದ್ದಾರೆ.