ETV Bharat / state

ಕೊರೊನಾಗೆ ವಿಜಯಪುರದ ಇಬ್ಬರು ಬಲಿ, 107 ಮಂದಿಗೆ ಸೋಂಕು ದೃಢ

author img

By

Published : Aug 19, 2020, 9:25 PM IST

ಸೋಂಕಿಗೆ ತುತ್ತಾಗಿ ಇಬ್ಬರು ಮೃತಪಟ್ಟಿದ್ದು ಮೃತರ ಸಂಖ್ಯೆ 62ಕ್ಕೆ ತಲುಪಿದೆ. 107 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

Vijayapura corona case's
Vijayapura corona case's

ವಿಜಯಪುರ: ಜಿಲ್ಲೆಯಲ್ಲಿ ಇಂದು 107 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 5,147ಕ್ಕೆ ಏರಿಕೆಯಾಗಿದೆ.

ನಾನಾ ಕಾಯಿಲೆಗಳ ಜೊತೆಗೆ ಕೊರೊನಾ ಸೋಂಕಿನಿಂದ ಇಂದು ಸಹ ಇಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಮೃತರ ಸಂಖ್ಯೆ 62ಕ್ಕೆ ತಲುಪಿದೆ. ಮೃತರ ಅಂತ್ಯಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.

ಇಂದು ಕೊರೊನಾದಿಂದ 19 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದಾರೆ. ಇಲ್ಲಿಯವರೆಗೆ 4,182 ಜನರು ಸಂಪೂರ್ಣ ಗುಣಮುಖರಾಗಿದ್ದಾರೆ.

ವಿಜಯಪುರ ಜಿಲ್ಲಾಸ್ಪತ್ರೆ, ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಸದ್ಯ 903 ಸೋಂಕಿತರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಒಟ್ಟು 44,398 ಜನರ ಮೇಲೆ ನಿಗಾ ಇಡಲಾಗಿದೆ. 62,918 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 56,782 ಜನರ ವರದಿ ನೆಗೆಟಿವ್ ಬಂದಿದ್ದು 5,147 ಜನರಿಗೆ ಪಾಸಿಟಿವ್ ವರದಿ ಬಂದಿದೆ. ಇನ್ನೂ 987 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.