ವಿಜಯಪುರ: ಜಿಲ್ಲೆಯಲ್ಲಿ ಇಂದು ಹೊಸದಾಗಿ 112 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ನಿನ್ನೆ 197 ಜನರ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಇಲ್ಲಿವರೆಗೆ ಜಿಲ್ಲೆಯಲ್ಲಿ 5,259 ಜನರಿಗೆ ಸೋಂಕು ತಗುಲಿದೆ.
ಇಂದು ಕೊರೊನಾದಿಂದ 150 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 4,332ಕ್ಕೆ ಏರಿಕೆಯಾಗಿದೆ.
ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ನಾಲ್ವರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ 66ಕ್ಕೆ ಏರಿಕೆಯಾಗಿದೆ.
ರೋಗಿ ನಂ: 216851, 68 ವರ್ಷದ ವೃದ್ಧ, ರೋಗಿ ನಂ: 216860, 63 ವರ್ಷ ದ ವೃದ್ಧ, ರೋಗಿ ನಂ: 180159, 63 ವರ್ಷದ ವೃದ್ಧ, ಹಾಗೂ ರೋಗಿ ನಂ: 203175, 70 ವೃದ್ಧ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರ ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.
ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 861 ಜನರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಇಲ್ಲಿಯವರೆಗೆ 44,638 ಜನರ ಮೇಲೆ ನಿಗಾ ಇಡಲಾಗಿದೆ. 63,766 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 57,197 ಜನರ ವರದಿ ನೆಗಟಿವ್ ಆಗಿದೆ. 5260 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 1309 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.