ETV Bharat / state

ವಿಜಯಪುರದಲ್ಲಿ ಶತಕ ಬಾರಿಸಿದ ಕೊರೊನಾ; 122 ಪಾಸಿಟಿವ್, ಮೂರು ಸಾವು

ವಿಜಯಪುರದಲ್ಲಿ ಇಂದು 122 ಹೊಸ ಕೊರೊನಾ ಕೇಸ್​ಗಳು ದಾಖಲಾಗಿದ್ದು, ಮೂವರು ಸಾವನಪ್ಪಿದ್ದಾರೆ. ಇಲ್ಲಿವರೆಗೆ ಜಿಲ್ಲೆಯಲ್ಲಿ 6862 ಜನರಿಗೆ ಸೋಂಕು ತಗುಲಿದೆ.

Vijayapur
ವಿಜಯಪುರ
author img

By

Published : Sep 2, 2020, 7:38 PM IST

ವಿಜಯಪುರ: ಜಿಲ್ಲೆಯಲ್ಲಿ ಇಂದು ಪಾಸಿಟಿವ್ ಸಂಖ್ಯೆ ಶತಕ ಕಂಡಿದೆ. ಇಂದು 122 ಹೊಸದಾಗಿ ಪಾಸಿಟಿವ್ ಕೇಸ್​ ದೃಢವಾಗಿದ್ದು, ಇಂದು 1094 ಜನರ ಕೊರೊನಾ ಟೆಸ್ಟ್ ಮಾಡಲಾಗಿತ್ತು.

ಇಲ್ಲಿವರೆಗೆ ಜಿಲ್ಲೆಯಲ್ಲಿ 6862 ಜನರಿಗೆ ಸೋಂಕು ತಗುಲಿದೆ. ಇಂದು ಕೊರೊನಾದಿಂದ 79 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಈವರೆಗೆ ಕೊರೊನಾ ದಿಂದ ಗುಣಮುಖರಾ‌ದವರ ಸಂಖ್ಯೆ 6016 ಕ್ಕೆ ಏರಿಕೆಯಾಗಿದೆ. ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಸಹ ಮೂವರು ಸಾವನ್ನಪ್ಪಿದ್ದಾರೆ. ಇವುಗಳ ಸಂಖ್ಯೆ 113 ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.

ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 733 ಜನರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಇಲ್ಲಿಯವರೆಗೆ 56,086 ಜನರ ಮೇಲೆ ನಿಗಾ ಇಡಲಾಗಿದೆ. 75, 744 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 68,176 ಜನರ ವರದಿ ನೆಗಟಿವ್ ಆಗಿದೆ. 6862 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 289 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.