ETV Bharat / state

ವಿಜಯಪುರ ಜಿಲ್ಲೆಯಲ್ಲಿಂದು 127 ಜನರಿಗೆ ಕೊರೊನಾ; 196 ಮಂದಿ ಗುಣಮುಖ - ವಿಜಯಪುರ ಕೊರೊನಾ ಲೆಟೆಸ್ಟ್ ನ್ಯೂಸ್

ವಿಜಯಪುರ ಜಿಲ್ಲೆಯಲ್ಲಿ ಇಂದು ಕಂಡು ಬಂದಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ.

ವಿಜಯಪುರ
ವಿಜಯಪುರ
author img

By

Published : Aug 30, 2020, 8:07 PM IST

ವಿಜಯಪುರ: ಜಿಲ್ಲೆಯಲ್ಲಿ ಇಂದು ಹೊಸದಾಗಿ 127 ಜನರಿಗೆ ಕೊರೊನಾ ಸೋಂಕು ತಗುಲಿದೆ.

ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6589ಕ್ಕೆ ಏರಿಕೆಯಾಗಿದೆ.

ನಾನಾ ರೋಗದಿಂದ ಹಾಗೂ ಕೊರೊನಾದಿಂದ ಇಂದು ನಾಲ್ವರು ಸಾವನ್ನಪ್ಪಿದ್ದು, ಈ ಮೂಲಕ ಮೃತರ ಸಂಖ್ಯೆ 103 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿಂದು 196 ಜನರು ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 5713 ಜನರು ಗುಣಮುಖರಾದಂತಾಗಿದೆ. ಇನ್ನು ಜಿಲ್ಲೆಯಲ್ಲಿ 773 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರಿದಿದೆ.

ಇಲ್ಲಿಯವರೆಗೆ 54,986 ಜನರ ಮೇಲೆ ನಿಗಾ ಇಡಲಾಗಿದೆ. 73,569 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 66,014 ಜನರ ವರದಿ ನೆಗೆಟಿವ್ ಆಗಿದೆ. 6589 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 966 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.