ETV Bharat / state

129 ಮಂದಿಗೆ ಕೊರೊನಾ... ವಿಜಯಪುರ ಸೋಂಕಿತರ ಸಂಖ್ಯೆ 3834ಕ್ಕೆ ಏರಿಕೆ! - ವಿಜಯಪುರ ಕೊರೊನಾ ಪ್ರಕರಣ

129 ಕೋವಿಡ್ ಪ್ರಕರಣ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 3834ಕ್ಕೆ ಏರಿಕೆಯಾಗಿದೆ. ಈ ಪೈಕಿ 2801 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

Vijayapura covid case
Vijayapura covid case
author img

By

Published : Aug 9, 2020, 11:22 PM IST

ವಿಜಯಪುರ: ಜಿಲ್ಲೆಯಲ್ಲಿ ಇಂದು 129 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈವರೆಗೆ ಒಟ್ಟು 3834 ಕೋವಿಡ್ ಪ್ರಕರಣ ವರದಿಯಾಗಿವೆ. ಹಾಗೂ ಓರ್ವ ಸೋಂಕಿಗೆ ಬಲಿಯಾಗಿದ್ದಾರೆ.

ಮುದ್ದೇಬಿಹಾಳ ತಾಲೂಕಿನ ಮಿಣಜಗಿ ಗ್ರಾಮದ P-139097 (70 ವರ್ಷ ವ್ಯಕ್ತಿ)ರನ್ನು ಜು.29 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.‌ ಇವರ ಗಂಟಲು ದ್ರವ ವರದಿ ಪಾಸಿಟಿವ್ ಬಂದಿದ್ದು, ಚಿಕಿತ್ಸೆ ಫಲಿಸದೇ ಜು.31 ರಂದು ಮೃತಪಟ್ಟಿದ್ದಾರೆ. ಇವರ ಅಂತ್ಯಸಂಸ್ಕಾರವನ್ನು ಶಿಷ್ಟಾಚಾರದಂತೆ ಮಾಡಲಾಗಿದೆ.

ಸೋಂಕಿನಿಂದ ಇಂದು 110 ಜನ ಸೇರಿ ಒಟ್ಟು 2801 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ 992 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಸೋಂಕಿಗೆ ತುತ್ತಾಗಿ 42 ಮಂದಿ ಸಾವನ್ನಪ್ಪಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ 42,534 ಜನರ ಮೇಲೆ ನಿಗಾ ಇಡಲಾಗಿದೆ. 54,806 ಜನರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, 49,656 ಜನರ ವರದಿ ನೆಗಟಿವ್ ಬಂದಿದೆ. 3834 ಮಂದಿಯ ವರದಿ ಪಾಸಿಟಿವ್ ಬಂದಿದೆ. ಇನ್ನೂ 1305 ಜನರ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.