ವಿಜಯಪುರ: ಜಿಲ್ಲೆಯಲ್ಲಿ ಇಂದು ಹೊಸದಾಗಿ 131 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 6993 ಕ್ಕೆ ಏರಿಕೆಯಾಗಿದ.
ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಇದುವರೆಗೆ ಒಟ್ಟು ಮೃತಪಟ್ಟವರ ಸಂಖ್ಯೆ 115 ಕ್ಕೆ ಏರಿಕೆಯಾಗಿದೆ.
ಇಂದು ಕೊರೊನಾದಿಂದ 173 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 6189 ಕ್ಕೆ ಏರಿಕೆಯಾಗಿದೆ. ಇನ್ನು ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 689 ಜನರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.
ಇಲ್ಲಿಯವರೆಗೆ 56,219 ಜನರ ಮೇಲೆ ನಿಗಾ ಇಡಲಾಗಿದೆ. 76,777 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 69,448 ಜನರ ವರದಿ ನೆಗೆಟಿವ್ ಆಗಿದೆ. 6995 ಜನರಿಗೆ ಪಾಸಿಟಿವ್ ದೃಢಪಟ್ಟಿದೆ.
ಇನ್ನೂ 334 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.