ETV Bharat / state

ವಿಜಯಪುರ ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 135 ಮಂದಿ ಗುಣಮುಖ: ಇಬ್ಬರು ಬಲಿ - Vijayapura corona latest news

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ 135 ಮಂದಿ ಗುಣಮುಖರಾಗಿದ್ದಾರೆ. ಇರದ ಜೊತೆಗೆ ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

Vijayapura
Vijayapura
author img

By

Published : Oct 14, 2020, 9:56 PM IST

ವಿಜಯಪುರ: ಜಿಲ್ಲೆಯಲ್ಲಿ ಇಂದು 128 ಜನರಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿದೆ.

ಇಂದಿನ ಕೋವಿಡ್ ಪ್ರಕರಣಗಳ ವಿವರ:

ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,240ಕ್ಕೆ ಏರಿಕೆಯಾಗಿದೆ.

ಗುಣಮುಖ:

ಜಿಲ್ಲೆಯಲ್ಲಿ ಇಂದು ಕೊರೊನಾದಿಂದ 135 ಜನರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 10,168 ಮಂದಿ ಗುಣಮುಖರಾಗಿದ್ದಾರೆ.

ಮೃತರ ಮಾಹಿತಿ:

ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಇದುವರೆಗೆ ಒಟ್ಟು 179 ಜನರು ಮೃತಪಟ್ಟಿದ್ದಾರೆ. ಮೃತರ ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ

ಸಕ್ರಿಯ ಪ್ರಕರಣಗಳಿಷ್ಟು:

ಇನ್ನು ಜಿಲ್ಲಾಸ್ಪತ್ರೆ, ಹಲವು ಖಾಸಗಿ ಆಸ್ಪತ್ರೆಗಳಲ್ಲಿ 893 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.

ಕೋವಿಡ್ ಪರೀಕ್ಷಾ ವಿವರ:

ಇಲ್ಲಿಯವರೆಗೆ 1,22,934 ಜನರ ಮೇಲೆ ನಿಗಾ ಇಡಲಾಗಿದೆ. 1,22,698 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 1,08,688 ಜನರ ವರದಿ ನೆಗೆಟಿವ್ ಆಗಿದೆ. 11,240 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 2,861 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.