ವಿಜಯಪುರ: ದಲಿತ ಯುವಕನ ಮೇಲೆ ನಡೆದ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಯನ್ನು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಿಜಯಪುರ ತಾಲೂಕಿನ ಡೋಮನಾಳ ಗ್ರಾಮದಲ್ಲಿ ಉರುಸ್ ನಡೆಯುತ್ತಿದ್ದ ವೇಳೆ ದಲಿತ ಯುವಕ ಸಾಗರ್ ಎಂಬಾತನನ್ನು ಕಂಬಕ್ಕೆ ಕಟ್ಟಿಹಾಕಿ ಸವರ್ಣೀಯರು ಹೊಡೆದು ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿತ್ತು. ಈ ಸಂಬಂಧ ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ: ದಲಿತ ಯುವಕನ ಮೇಲೆ ಹಲ್ಲೆ; ಬಲವಂತವಾಗಿ ಮೂತ್ರ ಮಿಶ್ರಿತ ಮದ್ಯ ಕುಡಿಸಿದ ದುಷ್ಕರ್ಮಿಗಳು