ವಿಜಯಪುರ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಮತ್ತು ಮೃತ ಪ್ರಕರಣಗಳು ದಿನೇ ದಿನೇ ಏರಿಕೆ ಕಾಣುತ್ತಿದೆ. ಇಂದು 151 ಕೊರೊನಾ ಪ್ರಕರಣಗಳು ವರದಿಯಾಗುವ ಮೂಲಕ ಸೋಂಕಿತರ ಸಂಖ್ಯೆ 5,534 ತಲುಪಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದೆ.
ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಮೂವರು ಸಾವನ್ನಪ್ಪಿದ್ದಾರೆ. ಸದ್ಯ ಮೃತರ ಸಂಖ್ಯೆ 73ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.
130 ಸೋಂಕಿತರು ಸಂಪೂರ್ಣ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಗುಣಮುಖರ ಸಂಖ್ಯೆ 4,648ಕ್ಕೆ ತಲುಪಿದ್ದು, 813 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.
ಈವರೆಗೆ 52,756 ಜನರ ಮೇಲೆ ನಿಗಾ ಇಡಲಾಗಿದೆ. 65,600 ಜನರ ಸ್ಯಾಂಪಲ್ ಪಡೆಯಲಾಗಿದೆ. ಈ ಪೈಕಿ 58,907 ಜನರ ವರದಿ ನೆಗಟಿವ್ ಮತ್ತು 5534 ಜನರಿಗೆ ಪಾಸಿಟಿವ್ ವರದಿ ಬಂದಿದೆ. ಇನ್ನೂ 1244 ಜನರ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.