ವಿಜಯಪುರ : ಜಿಲ್ಲೆಯಲ್ಲಿ ಇಂದು 152 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ ಹತ್ತು ಸಾವಿರ ಗಡಿದಾಟಿದೆ.
ಇಂದಿನ ಕೊರೊನಾ ಪ್ರಕರಣಗಳ ಮಾಹಿತಿ : ಇಂದು ಪತ್ತೆಯಾದ ಕೊರೊನಾ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,148ಕ್ಕೆ ಏರಿಕೆಯಾಗಿದೆ.
ಗುಣಮುಖ : ಇಂದು ಕೊರೊನಾದಿಂದ 43 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 8,942ಕ್ಕೆ ಏರಿಕೆಯಾಗಿದೆ.
ಮೃತರ ವಿವರ : ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 168ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.
ಸಕ್ರಿಯ ಪ್ರಕರಣಗಳಿಷ್ಟು : ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ 1,038 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.
ಕೋವಿಡ್ ಪರೀಕ್ಷಾ ವಿವರ : ಈವರೆಗೆ 1,08,163 ಜನರ ಮೇಲೆ ನಿಗಾ ಇಡಲಾಗಿದೆ. 1,09,372 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 98,683 ಜನರ ವರದಿ ನೆಗೆಟಿವ್ ಆಗಿವೆ. 10,148 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 628 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ತಿಳಿಸಿದ್ದಾರೆ.