ವಿಜಯಪುರ: ಜಿಲ್ಲೆಯಲ್ಲಿ ಇಂದು 158 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 1988ಕ್ಕೆ ಏರಿಕೆಯಾಗಿದೆ.
ಇಂದು 85 ಜನ ಕೊರೊನಾದಿಂದ ಗುಣಮುಖರಾಗಿದ್ದು, ಇಲ್ಲಿಯವರೆಗೆ 1387 ಜನ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿತ 577 ಜನರಿಗೆ ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದೆ.
ಇಲ್ಲಿಯವರೆಗೆ 24 ಜನ ಸಾವನ್ನಪ್ಪಿದ್ದು, ಓರ್ವ ರೋಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.