ವಿಜಯಪುರ: ಜಿಲ್ಲೆಯಲ್ಲಿ ಗುರುವಾರ 160 ಹೊಸದಾಗಿ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಇಲ್ಲಿವರೆಗೆ 11,400 ಜನರಿಗೆ ಸೋಂಕು ಹರಡಿದಂತಾಗಿದೆ.
ನಿನ್ನೆ ಕೊರೊನಾದಿಂದ 216 ಜನ ಗುಣಮುಖ ರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಲ್ಲಿಯವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 10,384 ಕ್ಕೆ ಏರಿಕೆಯಾಗಿದೆ.
ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದು, ಇದುವರೆಗೆ ಒಟ್ಟು 181 ಜನ ಕೊರೊನಾಗೆ ಬಲಿಯಾಗಿದ್ದಾರೆ.
ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 835 ಜನರಿಗೆ ಕೊರೊನಾ ಚಿಕಿತ್ಸೆ ಮುಂದುವರೆಸಲಾಗಿದೆ. ಇಲ್ಲಿಯವರೆಗೆ 1, 24, 154 ಜನರ ಮೇಲೆ ನಿಗಾವಹಿಸಲಾಗಿದೆ. 1, 23, 918 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 1,09, 455 ಜನರ ವರದಿ ನೆಗಟಿವ್ ಆಗಿದ್ದು, 11,400 ಜನರಿಗೆ ಪಾಸಿಟಿವ್ ಆಗಿದೆ. 3,153 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.