ವಿಜಯಪುರ: ಮೆಕ್ಕೆಜೋಳದ ಮಧ್ಯೆ ಅಕ್ರಮವಾಗಿ ಬೆಳೆದಿದ್ದ ಎರಡು ಲಕ್ಷ ರೂ. ಮೌಲ್ಯದ 72 ಕೆಜಿ ಗಾಂಜಾವನ್ನು ನಿಡಗುಂದಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯ ನಿಡಗುಂದಿ ತಾಲೂಕಿನ ರಾಜನಾಳ ಗ್ರಾಮದ ನಿವಾಸಿ ರವು ವಾಲಿಕಾರ ಎಂಬುವವರು ತಮ್ಮ ಮೆಕ್ಕೆಜೋಳದ ಹೊಲದ ಮಧ್ಯೆ ಗಾಂಜಾ ಗಿಡ ಬೆಳೆಸಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, 72 ಕೆಜಿ ಗಾಂಜಾವನ್ನು ವಶಪಡಿಸಿಕೊಂಡು ಆರೋಪಿ ರವಿ ವಾಲಿಕಾರನನ್ನು ಬಂಧಿಸಿದ್ದಾರೆ.
ಈ ಕುರಿತು ನಿಡಗುಂದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.