ETV Bharat / state

ವಿಜಯಪುರದಲ್ಲಿ ಇದುವರೆಗೆ 205 ಮಂದಿ ಕೊರೊನಾದಿಂದ ಗುಣಮುಖ: ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 30,761 ಜನರು ಬಂದ ಬಗ್ಗೆ ವರದಿಯಾಗಿದೆ. ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಇಲ್ಲಿಯವರೆಗೆ ಒಟ್ಟು 238 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.

DC YS Patila
DC YS Patila
author img

By

Published : Jun 19, 2020, 10:29 PM IST

ವಿಜಯಪುರ: ಜಿಲ್ಲೆಯಲ್ಲಿ ಇಂದು ಯಾವುದೇ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ಆದರೆ ಇದುವರೆಗೂ 205 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.

ಈ ಕುರಿತು ಮಾತನಾಡಿದ ಅವರು, ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 30,761 ಜನರು ಬಂದ ಬಗ್ಗೆ ವರದಿಯಾಗಿದೆ. ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಇಲ್ಲಿಯವರೆಗೆ ಒಟ್ಟು 238 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ ಎಂದರು.

ಸುಮಾರು 10,123 ಜನರು 28 ದಿನಗಳ ಐಸೋಲೇಷನ್ ಅವಧಿ ಪೂರ್ಣಗೊಳಿಸಿದ್ದು, 20,425 ಜನರು (1ರಿಂದ 28 ದಿನಗಳ) ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ. ಈವರೆಗೆ ಒಟ್ಟು 7 ಜನ ಮೃತಪಟ್ಟಿದ್ದು, 205 ಜನರು ಕೋವಿಡ್-19ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದರು.

ಒಟ್ಟು 26 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 26,956 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಿದ್ದು, 26,575 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 143 ಜನರ ಗಂಟಲು ದ್ರವದ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.