ETV Bharat / state

ವಿಜಯಪುರ: ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಪರೀಕ್ಷೆಗೆ 2,161 ವಿದ್ಯಾರ್ಥಿಗಳು ಗೈರು - ವಿಜಯಪುರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುದ್ದಿ

ಪ್ರಥಮ ಭಾಷೆ ಪರೀಕ್ಷೆ ಬರೆಯಲು ಒಟ್ಟು 35,268 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು, 33,107 ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

ಎಸ್‌ಎಸ್‌ಎಲ್‌ಸಿ  ಪರೀಕ್ಷೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆ
author img

By

Published : Jul 2, 2020, 2:56 PM IST

ವಿಜಯಪುರ: ಇಂದು ನಡೆದ ಎಸ್‌ಎಸ್‌ಎಲ್‌ಸಿ ಪ್ರಥಮ ಭಾಷೆ ಪರೀಕ್ಷೆಗೆ ಜಿಲ್ಲೆಯಲ್ಲಿ 2,161 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಡಿಡಿಪಿಐ ಪ್ರಸನ್ನಕುಮಾರ ಮಾಹಿತಿ ನೀಡಿದ್ದಾರೆ‌.

ಜಿಲ್ಲಾದ್ಯಂತ 121 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 59 ವಿದ್ಯಾರ್ಥಿಗಳು ಕಂಟೇನ್ಮೆಂಟ್ ಝೋನ್‌ಗಳಿಂದ ಬಂದು ಪರೀಕ್ಷೆಗೆ ಹಾಜರಾಗಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಪರೀಕ್ಷೆಗೆ ಆಗಮಿಸಿದ 8 ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರುಂಟಾಗಿದ್ದು ಅವರನ್ನು ವಿಶೇಷ ಕೊಠಡಿಯಲ್ಲಿ ಕುಳ್ಳಿರಿಸಲಾಗಿತ್ತು. ಮೊದಲ ಬಾರಿಗೆ ಪರೀಕ್ಷೆ ಬರೆಯಲು 1,369 ಖಾಸಗಿ ಅಭ್ಯರ್ಥಿಗಳು ನೋಂದಣಿ ಮಾಡಿದ್ದು ಇವರ ಪೈಕಿ 426 ಅಭ್ಯರ್ಥಿಗಳು ಗೈರಾಗಿದ್ದಾರೆ‌. ನೆರೆಯ ರಾಜ್ಯಗಳಿಂದ ವಿದ್ಯಾರ್ಥಿಗಳು ಇಂದಿನ ಪರೀಕ್ಷೆಗೆ ಹಾಜರಾಗಿಲ್ಲ ಎಂದು ಡಿಡಿಪಿಐ ದೂರವಾಣಿ ಮೂಲಕ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.