ETV Bharat / state

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಜಯಪುರಕ್ಕೆ 227 ಕೋಟಿ ರೂ. ಸಾಲ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಜಯಪುರ ಜಿಲ್ಲೆಯ ವಿವಿಧ ಚಟುವಟಿಕೆಗಳು, ಗ್ರಾಮೀಣ ಪ್ರದೇಶದ ರೈತರು ಹಾಗೂ ಮಹಿಳಾ ಸಂಘಗಳಿಗೆ 227 ಕೋಟಿ ರೂ. ಸಾಲ ವಿತರಣೆ ಮಾಡಲಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

227 crore from Dharmasthala Rural Development Project
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಜಯಪುರಕ್ಕೆ 227 ಕೋಟಿ ರೂ. ಸಾಲ ವಿತರಣೆ
author img

By

Published : Jun 25, 2020, 5:47 PM IST

ಮುದ್ದೇಬಿಹಾಳ(ವಿಜಯಪುರ): ಮುದ್ದೇಬಿಹಾಳ ಪಟ್ಟಣದ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ವಿಕಲಚೇತನರಿಗೆ ಸಲಕರಣೆಗಳನ್ನ ವಿತರಣೆ ಮಾಡಲಾಯಿತು.

ವಿಕಲಚೇತನರಿಗೆ ಸಲಕರಣೆ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಶ್ರೀನಿವಾಸ ಪೂಜಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಜಯಪುರ ಜಿಲ್ಲೆಯ ವಿವಿಧ ಚಟುವಟಿಕೆಗಳು, ಗ್ರಾಮೀಣ ಪ್ರದೇಶದ ರೈತರು ಹಾಗೂ ಮಹಿಳಾ ಸಂಘಗಳಿಗೆ 227 ಕೋಟಿ ರೂ. ಸಾಲ ವಿತರಣೆ ಮಾಡಲಾಗಿದೆ ಎಂದರು.

ಯೋಜನಾಧಿಕಾರಿ ಹೊನ್ನಪ್ಪ ಮಾತನಾಡಿ, ತಾಲೂಕಿನಲ್ಲಿ ಸಂಸ್ಥೆಯ ವತಿಯಿಂದ 67 ಕುಟುಂಬಗಳಿಗೆ ಮಾಸಾಶನ ವಿತರಿಸಲಾಗುತ್ತಿದೆ. ಜಿಲ್ಲೆಯಲ್ಲಿ 700 ಜನ ವಿಕಲಚೇತನರಿಗೆ ಅಗತ್ಯ ಸಲಕರಣೆಗಳನ್ನು ವಿತರಿಸಲಾಗುತ್ತಿದೆ ಎಂದರು.

ಸಿಂಡಿಕೇಟ್ ಬ್ಯಾಂಕ್ ವ್ಯವಸ್ಥಾಪಕ ಮಹೇಶ್​ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಲ ಸೌಲಭ್ಯ ಪಡೆದುಕೊಂಡು ಅಭಿವೃದ್ಧಿ ಸಾಧಿಸಬೇಕು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.