ವಿಜಯಪುರ: ಅಕ್ರಮವಾಗಿ ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ ಗಾಂಜಾ ವಶಪಡಿಸಿಕೊಂಡು ಮೂವರನ್ನು ಬಂಧಿಸುವಲ್ಲಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ದೊಂಡಿಬಾ ಜರಕ, ಆಕಾಶ ಬೋರಕರ, ಯಲ್ಲಪ್ಪ ಕರೆಪ್ಪನವರ ಬಂಧಿತರು. ವಿಜಯಪುರ ತಾಲೂಕಿನ ಡೋಮನಾಳ ಗ್ರಾಮದ ಬಳಿಯ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟಿದ್ದರು. ಬಂಧಿತರಿಂದ 8 ಕೆಜಿ ಗಾಂಜಾ ಹಾಗೂ ಒಂದು ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಸಿಪಿಐ ಸಂಗಮೇಶ ಪಾಲಬಾವಿ, ಪಿಎಸ್ಐ ಆನಂದ ಠಕ್ಕಣ್ಣನವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.