ETV Bharat / state

ಆಲಮಟ್ಟಿಯಿಂದ 3.50 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ಹಲವು ಗ್ರಾಮಗಳ ಕೃಷಿ ಭೂಮಿ ಜಲಾವೃತ

ಆಲಮಟ್ಟಿ ಜಲಾಶಯದಿಂದ ಶನಿವಾರ ಸಂಜೆ ಎಲ್ಲ 26 ಗೇಟ್ ಮೂಲಕ 3.50ಲಕ್ಷ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ್ ಮಾಹಿತಿ‌ ನೀಡಿದ್ದಾರೆ.

ಆಲಮಟ್ಟಿ ಜಲಾಶಯದಿಂದ 3.50 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

author img

By

Published : Jul 24, 2021, 7:00 PM IST

Updated : Jul 24, 2021, 7:17 PM IST

ವಿಜಯಪುರ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಹಾಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಶಯಕ್ಕೆ ಮತ್ತೆ 2.20 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಇದರ ಪರಿಣಾಮ ಆಲಮಟ್ಟಿ ಜಲಾಶಯದಿಂದ ಶನಿವಾರ ಸಂಜೆ ಎಲ್ಲ 26 ಗೇಟ್ ಮೂಲಕ 3.50ಲಕ್ಷ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ್ ಮಾಹಿತಿ‌ ನೀಡಿದ್ದಾರೆ.

ಆಲಮಟ್ಟಿಯಿಂದ 3.50 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

ಇದರ ಪರಿಣಾಮ ಮುದ್ದೇಬಿಹಾಳ ತಾಲೂಕಿನ ಕಮಲದಿನ್ನಿ, ಗಂಗೂರ, ದೇವೂರ, ನಾಗರಾಳ, ಕಾಳಗಿ ಮತ್ತು ನಿಡಗುಂದಿ ತಾಲೂಕಿನ ಅರಳದಿನ್ನಿ ಗ್ರಾಮಗಳ ಕೃಷಿ ಜಮೀನುಗಳಿಗೆ ನೀರು ನುಗ್ಗಿದ್ದು, ಈ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಮುನ್ನಚ್ಚರಿಕೆ ಕ್ರಮವಾಗಿ ಕಾಳಜಿ ಕೇಂದ್ರ ಹಾಗೂ ಜಾನುವಾರುಗಳಿಗೆ ಗೋ ಶಾಲೆ ತೆರೆಯಲು ಸ್ಥಳ ಗುರುತಿಸಲಾಗಿದೆ. ಇದರ ಜತೆ ಕೃಷ್ಣಾ ನದಿ ಪಾತ್ರ ಜನರಿಗೆ ಎಚ್ಚರಿಕೆ ನೀಡಲಾಗಿದ್ದು, ನದಿ ಕಡೆ ಹೋಗದಂತೆ ಡಂಗೂರು ಮೂಲಕ ಎಚ್ಚರಿಕೆ ನೀಡಲಾಗಿದೆ.

ಈಗಾಗಲೇ ಜಿಲ್ಲಾಧಿಕಾರಿ ಕಚೇರಿಯಲ್ಲಿ 24x7 ಸಹಾಯವಾಣಿ ಸಹ‌ ಆರಂಭಿಸಲಾಗಿದೆ. ಟೋಲ್ ಫ್ರೀ ನಂಬರ 1077ಕ್ಕೆ ಇಲ್ಲವೇ 08352-221261 ಕರೆ ಮಾಡಬಹುದು ಎಂದು ಡಿಸಿ ತಿಳಿಸಿದ್ದಾರೆ. ಸದ್ಯ ಭೀಮಾತೀರದಲ್ಲಿ ಯಾವುದೇ ಪ್ರವಾಹ ಪರಿಸ್ಥಿತಿ ಎದುರಾಗಿಲ್ಲ.‌ ಕೃಷ್ಣಾ ನದಿ‌ ಪಾತ್ರದಲ್ಲಿ ಮಾತ್ರ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಕೃಷ್ಣಾ ನದಿ ಪಾತ್ರದ ತಹಶೀಲ್ದಾರ್​, ನೋಡಲ್ ಅಧಿಕಾರಿ, ತಾಲೂಕು ಆಡಳಿತ ಸ್ಥಳದಲ್ಲಿ ಪರಿಸ್ಥಿತಿ ಎದುರಿಸಬೇಕು ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ : ಬೆಳಗಾವಿಯಲ್ಲಿ ಮಳೆ ಅವಾಂತರ: ಆಸ್ಪತ್ರೆ ಒಳಗಿದ್ದ ರೋಗಿಗಳ ಪರದಾಟ

Last Updated : Jul 24, 2021, 7:17 PM IST

For All Latest Updates

TAGGED:

Almatti Dam
ETV Bharat Logo

Copyright © 2024 Ushodaya Enterprises Pvt. Ltd., All Rights Reserved.