ETV Bharat / state

ವಿಜಯಪುರ ಜಿಲ್ಲೆಯಲ್ಲಿ 37 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ - ವಿಜಯಪುರ

ವಿಜಯಪುರ ಜಿಲ್ಲೆಯಲ್ಲಿ ನಿನ್ನೆ ಹೊಸದಾಗಿ 37 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಅಲ್ಲದೆ ಸೋಂಕಿನಿಂದ 39 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

Vijaypur
ವಿಜಯಪುರ ಜಿಲ್ಲೆಯಲ್ಲಿ 37 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ
author img

By

Published : Oct 29, 2020, 7:41 AM IST

ವಿಜಯಪುರ: ಜಿಲ್ಲೆಯಲ್ಲಿ ನಿನ್ನೆ ಹೊಸದಾಗಿ 37 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಇಲ್ಲಿಯವರೆಗೆ 12,313 ಜನರಿಗೆ ಸೋಂಕು ತಗುಲಿದೆ.

ಸೋಂಕಿನಿಂದ 39 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾ‌ದವರ ಸಂಖ್ಯೆ 11,666ಕ್ಕೆ ಏರಿಕೆಯಾಗಿದೆ. ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಒಬ್ಬರು ‌ಮೃತಪಟ್ಟಿದ್ದು, ಇಲ್ಲಿಯವರೆಗೆ 193 ಜನ ಮೃತಪಟ್ಟಿದ್ದಾರೆ. ಉಳಿದಂತೆ ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 454 ಜನ ಸಕ್ರಿಯ ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ 1,38,901 ಜನರ ಮೇಲೆ ನಿಗಾ ಇಡಲಾಗಿದೆ. 1,37,517 ಜನರ ಗಂಟಲು ದ್ರವದ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 1,24,069 ಜನರ ವರದಿ ನೆಗಟಿವ್ ಬಂದಿದೆ. 12,313 ಜನರಿಗೆ ಪಾಸಿಟಿವ್ ಬಂದಿದ್ದು, 1139 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್​​ ಕುಮಾರ್​​ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.