ವಿಜಯಪುರ: ಮಹಾರಾಷ್ಟ್ರಕ್ಕೆ ರಾಜ್ಯ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಜಯಪುರ ವಿಭಾಗದಿಂದ 61 ಬಸ್‌ಗಳು ಓಡಾಟ ನಡೆಸಿವೆ. ಆದರೆ ಪ್ರಯಾಣಿಕರ ಕೊರತೆಯಿಂದ ಸಂಸ್ಥೆಗೆ ನಷ್ಟವಾಗಿದೆ ಎಂದು ಕೆಎಸ್‌ಆರ್‌ಟಿಸಿ ಡಿಸಿ ನಾರಾಯಣಪ್ಪ ಕುರಬರ ಹೇಳಿದ್ದಾರೆ.
ಸೆ. 21ರಿಂದ ರಾಜ್ಯ ಸರ್ಕಾರ ಮಹಾರಾಷ್ಟ್ರಕ್ಕೆ ಕೆಎಸ್‌ಆರ್‌ಟಿಸಿ ಬಸ್ ಓಡಾಟಕ್ಕೆ ಅವಕಾಶ ಮಾಡಿಕೊಟ್ಟಿದೆ. ಆದರೆ ಕೊರೊನಾ ಭಯದಿಂದ ಪ್ರಯಾಣಿಕರು ಬಸ್ ಹತ್ತಲು ಹಿಂದೇಟು ಹಾಕುತ್ತಿದ್ದಾರೆ. ಕಳೆದ ವರ್ಷ 161 ಬಸ್‌ಗಳು ವಿಜಯಪುರ ವಿಭಾಗದಿಂದ ಮಹಾರಾಷ್ಟ್ರಕ್ಕೆ ಸಂಚರಿಸುತ್ತಿದ್ದವು. ಇದರಿಂದ ಸೆಪ್ಟೆಂಬರ್ ತಿಂಗಳಲ್ಲಿ 6 ಕೋಟಿ ಆದಾಯ ಬಂದಿತ್ತು. ಆದರೆ ಈ ಬಾರಿ ಪ್ರಯಾಣಿಕರ ಕೊರತೆಯಿಂದ 4.50 ಕೋಟಿ ಆದಾಯ ಬಂದಿದೆ.
ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದು, ಜಿಲ್ಲೆಯಿಂದ ಹೆಚ್ಚು ಜನ ಮಹಾರಾಷ್ಟ್ರ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ವಿಭಾಗದಿಂದ ಹೋಗುವ ಬಸ್‌ಗಳಿಗೆ ಸ್ಯಾನಿಟೈಸರ್ ಸಿಂಪಡಣೆ, ಸಿಬ್ಬಂದಿಗೆ ಆರೋಗ್ಯ ರಕ್ಷಣಾ ಕಿಟ್‌ಗಳು ನೀಡುವುದು ಸೇರಿದಂತೆ ಎಲ್ಲಾ ಮುಂಜಾಗ್ರತಾ ಕ್ರಮ ಅನುಸರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.