ETV Bharat / state

ಮುದ್ದೇಬಿಹಾಳದಲ್ಲಿ ಪೊಲೀಸರ ದಾಳಿ... 75 ಕೆ.ಜಿ. ಗಾಂಜಾ ವಶಕ್ಕೆ - ganja seized latest news

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಚವನಬಾವಿ ಗ್ರಾಮದಲ್ಲಿ ಹೊಲದಲ್ಲಿ ಬೆಳೆದಿದ್ದ ಸುಮಾರು 75 ಕೆ.ಜಿ. ಹಸಿ ಗಾಂಜಾವನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.

ganja
ಗಾಂಜಾ ವಶಕ್ಕೆ
author img

By

Published : Sep 19, 2020, 5:24 PM IST

ಮುದ್ದೇಬಿಹಾಳ : ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಚವನಬಾವಿ ಗ್ರಾಮದಲ್ಲಿ ಎರಡು ಕಡೆ ಪ್ರತ್ಯೇಕ ದಾಳಿ ನಡೆಸಿರುವ ಪೊಲೀಸರು 75 ಕೆಜಿ ಹಸಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಗಾಂಜಾ ವಶಕ್ಕೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರ್ವಾಲ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ. ರಾಮ್ ಅರಸಿದ್ದಿ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಈ. ಶಾಂತವೀರ ನೇತೃತ್ವದಲ್ಲಿ ಹಾಗೂ ಮುದ್ದೇಬಿಹಾಳ ತಹಸೀಲ್ದಾರ್ ಜಿ.ಎಸ್.ಮಳಗಿ ,ತಾಳಿಕೋಟೆ ಪಿಎಸೈ ಎಸ್.ಎಚ್.ಪವಾರ ಜಂಟಿಯಾಗಿ ದಾಳಿ ನಡೆಸಿದ್ದಾರೆ‌.

ಮುದ್ದೇಬಿಹಾಳ ಮತಕ್ಷೇತ್ರದ ತಾಳಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಚವನಬಾವಿ ಗ್ರಾಮದಲ್ಲಿ ಎರಡು ಕಡೆ ಪ್ರತ್ಯೇಕವಾಗಿ ದಾಳಿ ನಡೆಸಿ ಭೀಮಣ್ಣ ತಿಪ್ಪಣ್ಣ ತುರಡಗಿ ಹೊಲದಲ್ಲಿ ಬೆಳೆದ ಸುಮಾರು 55kg ಗಾಂಜಾ ಹಾಗೂ ಕೇಶಪ್ಪ ಯಮನಪ್ಪ ಈಳಗೇರ ಹೊಲದಲ್ಲಿ ಬೆಳೆದ ಸುಮಾರು 20kg ಗಾಂಜಾ ವಶ ಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತು ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.