ವಿಜಯಪುರ: ಜಿಲ್ಲೆಯಲ್ಲಿ ಶುಕ್ರವಾರ 75 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು 12,459 ಜನರಿಗೆ ಸೋಂಕು ತಗುಲಿದಂತಾಗಿದೆ.
ನಿನ್ನೆ 72 ಜನ ಸೋಂಕಿನಿಂದ ಗುಣಮುಖರಾಗಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 11,790ಕ್ಕೆ ಏರಿಕೆಯಾಗಿದ್ದು, 194 ಮಂದಿ ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲಾಸ್ಪತ್ರೆ, ಬೇರೆ ಬೇರೆ ಖಾಸಗಿ ಆಸ್ಪತ್ರೆಗಳಲ್ಲಿ 475 ಸಕ್ರಿಯ ಸೋಂಕಿತರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ 1,41,728 ಜನರ ಮೇಲೆ ನಿಗಾ ಇಡಲಾಗಿದ್ದು, 1,41,135 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 1,26,674 ಜನರ ವರದಿ ನೆಗೆಟಿವ್ ಆಗಿದೆ. 12,459 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 2,007 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.