ವಿಜಯಪುರ: ಜಿಲ್ಲೆಯಲ್ಲಿ ಇಂದು 87 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
87 ಜನರಿಗೆ ಕೊರೊನಾ :
ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 8,452 ಜನರಿಗೆ ಸೋಂಕು ತಗುಲಿದೆ.
ಗುಣಮುಖ :
ಕೊರೊನಾದಿಂದ ಈ ದಿನ 84 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 7,494 ಕ್ಕೆ ಏರಿಕೆಯಾಗಿದೆ. ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 813 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.
ಮೃತರ ವಿವರ :
ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 145 ಕ್ಕೆ ಏರಿಕೆಯಾಗಿದೆ.
ಕೋವಿಡ್ ಪರೀಕ್ಷೆ :
94, 336 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 84, 439 ಜನರ ವರದಿ ನೆಗೆಟಿವ್ ಆಗಿದೆ. 8,452 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 1449 ಜನರ ವರದಿ ಬರಬೇಕಾಗಿದೆ. ಇಲ್ಲಿಯವರೆಗೆ 81,523 ಜನರ ಮೇಲೆ ನಿಗಾ ಇಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.