ವಿಜಯಪುರ: ಜಿಲ್ಲೆಯಲ್ಲಿ ಇಂದು 84 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಇಲ್ಲಿವರೆಗೆ ಜಿಲ್ಲೆಯಲ್ಲಿ 6,673 ಜನರಿಗೆ ಸೋಂಕು ತಗುಲಿದೆ.
ಇಂದು ಕೊರೊನಾದಿಂದ 112 ಜನ ಗುಣಮುಖ ರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಕೊರೊನಾ ದಿಂದ ಗುಣಮುಖರಾದವರ ಸಂಖ್ಯೆ 5,825ಕ್ಕೆ ಏರಿಕೆಯಾಗಿದೆ.
ನಾನಾ ಕಾಯಿಲೆ ಹಾಗೂ ಕೊರೊನಾ ಸೋಂಕಿನಿಂದ ಇಂದು ಮೂವರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 106ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.
ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 742 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಇಲ್ಲಿಯವರೆಗೆ 55,116 ಜನರ ಮೇಲೆ ನಿಗಾ ಇಡಲಾಗಿದೆ. 73,598 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 66,236 ಜನರ ವರದಿ ನೆಗಟಿವ್ ಆಗಿದೆ. 6,673 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 686 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.