ವಿಜಯಪುರ: ಜಿಲ್ಲೆಯಲ್ಲಿ ಇಂದು ಮತ್ತೆ 90 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 2,648 ತಲುಪಿದೆ. ಹಾಗೂ ಓರ್ವ ವೃದ್ಧ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ.
P- 100978 (75 ವರ್ಷ) ಜು. 25ರಂದು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆ ವೇಳೆ ಕೋವಿಡ್ ವರದಿ ಪಾಸಿಟಿವ್ ಎಂದು ಬಂದಿದೆ. ಸದ್ಯ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 29ಕ್ಕೇರಿದೆ.
ಇನ್ನು, 39 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು ಈವರೆಗೆ ಒಟ್ಟು 1,978 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಸದ್ಯ 635 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.