ವಿಜಯಪುರ: ಜಿಲ್ಲೆಯಲ್ಲಿ ಈ ದಿನ ಹೊಸದಾಗಿ 92 ಜನರಿಗೆ ಕೊರೊನಾ ಸೋಂಕು ತಗುಲಿದೆ.
ಇಂದಿನ ಕೋವಿಡ್ ಪ್ರಕರಣಗಳಿಷ್ಟು:
ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11,974ಕ್ಕೆ ಏರಿಕೆಯಾಗಿದೆ.
ಗುಣಮುಖ :
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ 72 ಜನರು ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರಗೆ ಒಟ್ಟು 11,326 ಮಂದಿ ಗುಣಮುಖರಾದಂತಾಗಿದೆ.
ಮೃತರ ಮಾಹಿತಿ :
ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 190ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.
ಸಕ್ರಿಯ ಪ್ರಕರಣಗಳು :
ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 458 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.
ಕೋವಿಡ್ ಪರೀಕ್ಷಾ ವಿವರ :
ಇಲ್ಲಿಯವರೆಗೆ 1,33,424 ಜನರ ಮೇಲೆ ನಿಗಾ ಇಡಲಾಗಿದೆ. 1,32, 662 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 1,19,110 ಜನರ ವರದಿ ನೆಗೆಟಿವ್ ಆಗಿದೆ. 11,974 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 1580 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.