ವಿಜಯಪುರ: ಜಿಲ್ಲೆಯಲ್ಲಿ ಇಂದು 95 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 11,637 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ವಿವಿಧೆಡೆ 128 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 10,825 ಕ್ಕೆ ಏರಿಕೆಯಾಗಿದೆ.
ಮಹಾಮಾರಿ ಕೊರೊನಾಗೆ ಇಂದು ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 185 ಕ್ಕೆ ಏರಿಕೆಯಾಗಿದೆ. ವಿಜಯಪುರ ಜಿಲ್ಲಾಸ್ಪತ್ರೆ ಸೇರಿದಂತೆ ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 627 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.