ವಿಜಯಪುರ: ಅಪರಿಚಿತ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಮುಳವಾಡ ಕ್ರಾಸ್ ಬಳಿ ಸೋಮವಾರ ರಾತ್ರಿ ಸಂಭವಿಸಿದೆ.
ಮೂಲತಃ ಮೂಕರ್ತಿಹಾಳ ನಿವಾಸಿ ವಿಜಯಪುರದಲ್ಲಿ ವಾಸವಿದ್ದ ಮಡಿವಾಳಪ್ಪ ಬಸಪ್ಪ ಮುಕರ್ತಿಹಾಳ (35) ನಿನ್ನೆ ರಾತ್ರಿ ಮೂಕರ್ತಿಹಾಳದಿಂದ ವಿಜಯಪುರಕ್ಕೆ ಬೈಕ್ನಲ್ಲಿ ಹೋಗುತ್ತಿದ್ದರು. ಈ ವೇಳೆ, ಮಡಿವಾಳಪ್ಪನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದು, ಬೈಕ್ ರಸ್ತೆಯಲ್ಲಿಯೇ ಸ್ಕೀಡ್ ಆಗಿ ಬಿದ್ದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯೊಂಡಿದ್ದ ಮಡಿವಾಳಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಮನಗೂಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.
ಈ ಘಟನೆ ಕುರಿತು ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.