ವಿಜಯಪುರ: ಜಿಲ್ಲೆಯ ತಾಳಿಕೋಟೆ ಪಟ್ಟಣದ ಮಿಣಜಗಿ ರಸ್ತೆಯಲ್ಲಿರುವ ಹೊಯ್ಸಳ ಡಾಬಾದ ಹಿಂದುಗಡೆಯ ಕಲ್ಲಿನ ಕ್ವಾರಿಯ ನೀರಿನಲ್ಲಿ ಸೈಕಲ್ ತೊಳೆಯಲು ಹೋಗಿ ಕಾಲು ಜಾರಿ ಬಿದ್ದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೃತ ಬಾಲಕನನ್ನ ಸಿಂದಗಿ ತಾಲೂಕಿನ ಹಂದಿಗನೂರ ಗ್ರಾಮದ ಕಾರ್ತಿಕ ಗುರಣ್ಣ ಆಲ್ಯಾಳ(೧೪) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಭೇಟಿ ನೀಡಿ ಮೃತ ಬಾಲಕನ ಶವ ಹೊರತೆಗೆದಿದ್ದಾರೆ. ಬಾಲಕನ ಸಾವಿಗೆ ಸ್ಥಳೀಯ ಆಡಳಿತವೇ ಕಾರಣ, ಕಲ್ಲು ಕ್ವಾರಿ ಮುಚ್ಚಿದ್ದರೆ ಈ ಅನಾಹುತ ಸಂಭವಿಸುತ್ತಿರಲಿಲ್ಲ ಎಂದು ಬಾಲಕನ ಪೋಷಕರು ಆರೋಪಿಸಿದ್ದಾರೆ.
ಇದನ್ನೂ ಓದಿ: ನೀರು ತುಂಬಿದ ಕಲ್ಲು ಕ್ವಾರಿಯಲ್ಲಿ ಈಜಲು ಹೋದ ಯುವಕ ಸಾವು