ವಿಜಯಪುರ: ಬಾವಿಯಲ್ಲಿ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ ಗ್ರಾಮದಲ್ಲಿ ನಡೆದಿದೆ.

ತೆರೆದ ಬಾವಿಯಲ್ಲಿ ಕಾಲು ಜಾರಿ ಬಿದ್ದ ಪರಿಣಾಮ ಬಾಲಕ ಸಾವನ್ನಪ್ಪಿದ್ದಾನೆ. ಧರೆಪ್ಪ ಚಂದ್ರಶೇಖರ ಸುಧಾಮ (12) ಮೃತ ಬಾಲಕ ಎಂದು ಗುರುತಿಸಲಾಗಿದೆ. ಸತತ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಮೃತ ದೇಹವನ್ನು ಅಗ್ನಿ ಶಾಮಕ ಸಿಬ್ಬಂದಿ ಹೊರಗೆ ತೆಗೆಯುವಲ್ಲಿ ಯಶಸ್ವಿಯಾದರು.
ಈ ಸಂಬಂಧ ಹೋರ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.