ವಿಜಯಪುರ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಜಯಪುರ ನಗರದ ಗಾಂಧಿಚೌಕ್ ಪೊಲೀಸರು ಬಂಧಿಸಿದ್ದಾರೆ.
ಗಾಂಧಿಚೌಕ್ ಪಿಎಸ್ಐ ಶಂಕರಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ರಾಜಸ್ಥಾನ ಮೂಲದ ಆರೋಪಿ ಮಹಿಪಾಲ ರಾವ್ (28) ನನ್ನು ಬಂಧಿಸಿದ್ದಾರೆ. ಜೊತೆಗೆ ಆರೋಪಿ ಬಳಿಯಿದ್ದ 625 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಇನ್ನು ವಿಜಯಪುರ ನಗರದಲ್ಲಿ ಆರೋಪಿ ಗ್ಯಾಸ್ ಕಂಪನಿಯೊಂದರಲ್ಲಿ ಗ್ಯಾಸ್ ರಿಪೇರಿ ಕೆಲಸ ಮಾಡುತ್ತಿದ್ದ. ಜೊತೆಗೆ ಗಾಂಜಾ ಮಾರಾಟ ಮಾಡುತ್ತಿದ್ದ ಎಂದು ತನಿಖೆ ವೇಳೆ ತಿಳಿದುಬಂದಿದೆ. ಈ ಕುರಿತು ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.