ವಿಜಯಪುರ: ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ಆಲಮೇಲ ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಪ್ರದೀಪ ಎಂಟಮಾನ ಎಂಬುವವರನ್ನು ದುರ್ಷ್ಕಮಿಗಳು ಇಂದು ರಾತ್ರಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಸ್ನೇಹಿತರೊಂದಿಗೆ ತೆರಳಿದ್ದ ಪ್ರದೀಪ ಮೇಲೆ ನಾಲ್ಕೈದು ಜನರು ದಾಳಿ ಮಾಡಿ, ಕಲ್ಲು ಹಾಗೂ ಬಡಿಗೆಗಳಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ದಾಳಿಯ ಪರಿಣಾಮ ಪ್ರದೀಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರದೀಪ, ರೌಡಿ ಶೀಟರ್ ಆಗಿದ್ದ ಎಂದು ತಿಳಿದುಬಂದಿದೆ. ಕೊಲೆಗೆ ಹಳೇ ದ್ವೇಷವೇ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಆಲಮೇಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿ ಈ ಘಟನೆ ನಡೆದಿದೆ.
(ಇದನ್ನೂ ಓದಿ: ನಿಬಂಧನೆ ತೆರವು: ಕೋವಿಡ್ನಿಂದ ಮೃತಪಟ್ಟ ಬಿಪಿಎಲ್ ಕುಟುಂಬದವರಿಗೆ ₹ 1 ಲಕ್ಷ ಪರಿಹಾರ)