ETV Bharat / state

ವಿಜಯಪುರದಲ್ಲಿ ಹಡಪದ ಅಪ್ಪಣ್ಣ ಜಯಂತಿ ಸರಳ ಆಚರಣೆ - ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

12ನೇ ಶತಮಾನದ ಶರಣರು ನಮ್ಮೆಲ್ಲರಿಗೂ ದಾರಿ ದೀಪವಾಗಿದ್ದು, ಅವರು ಹಾಕಿಕೊಟ್ಟ ಮಾರ್ಗದಲ್ಲಿಯೇ ನಾವೆಲ್ಲರು ಸಾಗಬೇಕಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು.

A simple celebration of hadapada Appanna Jayanti in Vijayapura.
ವಿಜಯಪುರದಲ್ಲಿ ಹಡಪದ ಅಪ್ಪಣ್ಣ ಜಯಂತಿ ಸರಳ ಆಚರಣೆ..
author img

By

Published : Jul 8, 2020, 8:18 PM IST

ವಿಜಯಪುರ: 12ನೇ ಶತಮಾನದ ಬಸವಣ್ಣನವರ ಪ್ರತಿರೂಪವಾಗಿ ಶಿವಶರಣ ಹಡಪದ ಅಪ್ಪಣ್ಣ ಅವರನ್ನು ಕಾಣಬಹುದಾಗಿದ್ದು, ಅವರು ಕಾಯಕದ ಮೂಲಕವೇ ಬಸವಣ್ಣನವರ ಆಪ್ತ ಕಾರ್ಯದರ್ಶಿಗಳಾಗಿ ಇಂದಿಗೂ ನಮ್ಮೆಲ್ಲರ ಮನದಲ್ಲಿ ಅಚ್ಚಳಿಯದೆ ನೆಲೆವೂರಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಡಪದ ಅಪ್ಪಣ್ಣ ಅವರ ಜಯಂತಿಯನ್ನು ಸರಳವಾಗಿ ಆಚರಿಸಿ ಮಾತನಾಡಿದ ಅವರು, 12ನೇ ಶತಮಾನದ ಶರಣರು ನಮ್ಮೆಲ್ಲರಿಗೂ ದಾರಿ ದೀಪವಾಗಿದ್ದು, ಅವರು ಹಾಕಿಕೊಟ್ಟ ಮಾರ್ಗದಲ್ಲಿಯೇ ನಾವೆಲ್ಲರು ಸಾಗಬೇಕಿದೆ. ಇಂದು ಶರಣರನ್ನು ಒಂದು ಜಾತಿಗೆ ಅಥವಾ ಧರ್ಮಕ್ಕೆ ಸೀಮಿತವಾಗಿಸದೆ ಅವರ ತತ್ವ ಆದರ್ಶಗಳನ್ನು ಪಾಲಿಸಬೇಕು. ಶರಣರು ಜಾತಿ-ಧರ್ಮವನ್ನು ಮೀರಿದವರಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್​​ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಹೆಚ್ಚುವರಿ ಪೊಲೀಸ್​​ ವರಿಷ್ಠಾಧಿಕಾರಿ ರಾಮ ಅರಿಸಿದ್ದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಹೇಶ ಪೋತದಾರ್​, ವಿಜಯಪುರ ಎಸಿ ಸೋಮಲಿಂಗ ಗೆಣ್ಣೂರ, ಸಮಾಜದ ಮುಖಂಡರಾದ ಬಸವರಾಜ ಶಿವಶರಣ, ಶಿವಾನಂದ ತೊರವಿ, ಜಿ.ಎಸ್.ಕಟ್ಟಿ, ವಿಠ್ಠಲ ನಾವಿ, ನರಸು ಜುಮನಾಳ ಸೇರಿದಂತೆ ಇತರರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.