ಮುದ್ದೇಬಿಹಾಳ: ಅಬಕಾರಿ ಇಲಾಖೆ ನಿಯಮಗಳನ್ನು ಮದ್ಯದ ಅಂಗಡಿಗಳು ಗಾಳಿಗೆ ತೂರಿದ್ದರೂ ಮೌನವಾಗಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಮಂಜುನಾಥಸ್ವಾಮಿ ಕುಂದರಗಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ತಮ್ಮ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಪಟ್ಟಣದ ತಹಶೀಲ್ದಾರ್ ಕಚೇರಿ ಬಳಿ ರಕ್ತದಿಂದ ಪತ್ರ ಬರೆದು ತಹಸೀಲ್ದಾರ್ ಬಿ.ಎಸ್.ಕಡಕಭಾವಿ ಅವರಿಗೆ ಮನವಿ ಸಲ್ಲಿಸುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಬಕಾರಿ ಇಲಾಖೆಯ ನಿಯಮಗಳಡಿ ಮದ್ಯದಂಗಡಿಗಳು ನಡೆಯುತ್ತಿಲ್ಲ. ಡಾಬಾಗಳಲ್ಲಿ ಅಕ್ರಮ ಮದ್ಯ ಮಾರಾಟ ಯಥೇಚ್ಛವಾಗಿ ನಡೆಯುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕಿದ್ದ ಅಧಿಕಾರಿಗಳು ಕಣ್ಣು ಮುಚ್ಚಿಕೊಂಡು ಕುಳಿತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದೆ ಧರಣಿ ಕೈಗೊಂಡಿದ್ದ ಸಂದರ್ಭದಲ್ಲಿ ಎರಡು ದಿನ ಕೆಲವು ನಿಯಮಗಳನ್ನು ಪಾಲನೆ ಮಾಡಿದಂತೆ ಮಾಡಿ, ಮತ್ತೆ ತಮ್ಮ ಚಾಳಿ ಮುಂದುವರೆಸಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಉಳ್ಳಾಲದಲ್ಲಿ ಶಿಕಕಿ ಮೃತದೇಹ ಬಾವಿಯಲ್ಲಿ ಪತ್ತೆ