ವಿಜಯಪುರ : ಹೊಲದಲ್ಲಿ ಮಲಗಿದ್ದ ಯುವಕನನ್ನು ದುರ್ಷ್ಕಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಂಡಿ ತಾಲೂಕಿನ ಲಾಳಸಂಗಿ ಗ್ರಾಮದಲ್ಲಿ ನಡೆದಿದೆ.
ರಾಶಿಯಾಗಿದ್ದ ಈರುಳ್ಳಿ ಕಾಯಲು ಹೊಲದಲ್ಲಿ ಮಲಗಿದ್ದ ಯುವಕ ಸಿದ್ಧಾರೂಢ ಬಂಡಗಾರ್ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಕೊಡಲಿಯಿಂದ ಕೊಚ್ಚಿ ಸಿದ್ಧಾರೂಢನನ್ನು ಕೊಲೆ ಮಾಡಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಶ್ವಾನ ದಳ ಕರೆಯಿಸಿಕೊಂಡು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಎಎಸ್ಪಿ ರಾಮ ಅರಸಿದ್ಧಿ, ಡಿವೈಎಸ್ಪಿ ಶ್ರೀಧರ ದೊಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಘಟನೆ ಕುರಿತು ಇಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.