ವಿಜಯಪುರ: ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಂಥನಾಳ ಗ್ರಾಮದ ತೋಟದಲ್ಲಿ ಘಟನೆ ನಡೆದಿದೆ.
ಸಚಿನ ಅಂಗಟಗಿ ಕೊಲೆಯಾದ ಯುವಕ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ದುಷ್ಕರ್ಮಿಗಳು ಯುವಕನನ್ನು ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ಬಗ್ಗೆ ಇಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.