ವಿಜಯಪುರ : ಉಚಿತ ಬಸ್ ಪಾಸ್ ವಿತರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಗಾಂಧಿವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಚುನಾವಣೆ ಪೂರ್ವ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಭರವಸೆ ನೀಡಿದ್ದರು. ಆದರೀಗ ಅಧಿಕಾರ ಸಿಕ್ಕ ನಂತರ, ಬಸ್ ಪಾಸ್ ವಿಚಾರ ಮರೆತಿದ್ದಾರೆ. ಸರ್ಕಾರ ನುಡಿದಂತೆ ನಡೆಯಬೇಕು, ಈ ರೀತಿ ಸುಳ್ಳು ಭರವಸೆ ನೀಡಿ ವಿದ್ಯಾರ್ಥಿಗಳಿಗೆ ಮೋಸ ಮಾಡಬಾರದು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ರು. ಇದೇ ವೇಳೆ ಕಾರ್ಯಕರ್ತರಿಂದ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳು ಮೊಳಗಿದವು.
ಪ್ರತಿಭಟನೆಯ ಬಳಿಕ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು, ಬಸವೇಶ್ವರ ಸರ್ಕಲ್, ಅಂಬೇಡ್ಕರ್ ವೃತ್ತ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ರು.