ವಿಜಯಪುರ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಒಳಚರಂಡಿ ಹಾಗೂ ಪೈಪ್ಲೈನ್ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಲು ಲಂಚಕ್ಕೆ ಕೈಯ್ಯೊಡ್ಡಿದ ಎಕ್ಸಿಕ್ಯೂಟಿವ್ ಎಂಜಿನಿಯರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಎರಡು ವರ್ಷದ ಹಿಂದಿನ ಕಾಮಗಾರಿಯ ಎರಡು ಬಿಲ್ ಪಾವತಿ ಮಾಡಲು ಎಕ್ಸಿಕ್ಯೂಟಿವ್ ಎಂಜಿನಿಯರ್ ತಾರಾಸಿಂಗ್ ದೊಡ್ಡಮನಿ 4,000 ರೂ. ಹಣ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಗುತ್ತಿಗೆದಾರ ಸದಾನಂದ ವಿಠ್ಠಲ ಗುನ್ನಾಪುರ ಎಂಬವವರು ಎಸಿಬಿಗೆ ದೂರು ನೀಡಿದ್ದರು.
ಈ ದೂರಿನ ಆಧಾರದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಪಡೆಯುವಾಗ ಅಧಿಕಾರಿಯನ್ನು ಖೆಡ್ಡಾಗೆ ಕೆಡವಿದ್ದಾರೆ.
ಇದನ್ನೂ ಓದಿ: ಇಂದಿನಿಂದ ಕಠಿಣ ನಿಯಮ ಜಾರಿ; ಯಾವುದಕ್ಕೆ ಅವಕಾಶ, ಯಾವುದಕ್ಕೆ ನಿರ್ಬಂಧ?