ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯ ಎರಡು ಕಾಲುಗಳಿಗೆ ಗಂಭೀರ ಗಾಯವಾದ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಸುಮಾರು 57 ವರ್ಷದ ಮಹಿಳೆ ಬಸ್ ನಿಲ್ದಾಣದಲ್ಲಿ ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣವೆಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.
ಘಟನಾ ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮಹಿಳೆ ರಕ್ಷಣೆಗೆ ಧಾವಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಗಾಂಧಿ ಚೌಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ಬಳಿಕ ದೂರು ದಾಖಲಿಸಿಕೊಂಡಿದ್ದಾರೆ.