ವಿಜಯಪುರ: ಲಾರಿ ಹಾಗೂ ಬುಲೆರೋ ವಾಹನ ನಡುವೆ ಡಿಕ್ಕಿಯಾಗಿ ಓರ್ವ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ, ತಾಲೂಕಿನ ಉತ್ನಾಳ್ ಕ್ರಾಸ್ ಬಳಿ ನಡೆದಿದೆ.
ಹೆದ್ದಾರಿಯಲ್ಲಿ ಬುಲೆರೋ ವಾಹನವನ್ನು ಕ್ರಾಸಿಂಗ್ ಮಾಡುವ ವೇಳೆ ದುರ್ಘಟನೆ ನಡೆದಿದ್ದು, ಮತ್ತೋರ್ವ ಗಾಯಗೊಂಡಿದ್ದಾನೆ.
KA-28, N- 0514 ನಂಬರಿನ ಬುಲೆರೋ ಕಾರ್ ಆಗಿದ್ದು, ಗಾಯಾಳುವನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಬಳಿಕ ಲಾರಿ ಬಿಟ್ಟು ಚಾಲಕ ಹಾಗೂ ಕ್ಲೀನರ್ ಪರಾರಿಯಾಗಿದ್ದಾರೆ. ಮೃತನ ವಿಳಾಸದ ಕುರಿತು ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಮನಗೂಳಿ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.