ವಿಜಯಪುರ: ವಿಜಯಪುರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ.
ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ಗಳಿಗೆ ಆಯಿಲ್ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಬಳಿಕ ಲಾರಿ ಪಲ್ಟಿಯಾಗಿದೆ. ಸರಣಿ ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ವಿಜಯಪುರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೈಕ್ ಹಾಗೂ ಟ್ಯಾಂಕರ್ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ಇನ್ನು ಪರಾರಿಯಾಗಿರುವ ಲಾರಿ ಚಾಲಕನ ಬಲೆಗೆ ಪೊಲೀಸರು ಜಾಲ ಬೀಸಿದ್ದಾರೆ. ವಿಜಯಪುರ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.