ವಿಜಯಪುರ: ವಿದ್ಯುತ್ ಘಟಕದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದ ಬಳಿ ನಡೆದಿದೆ.
ಮುಳವಾಡ ಏತ ನೀರಾವರಿ ಯೋಜನೆಯ ಮುಖ್ಯ ಕಾಲುವೆಯ ಜಾಕ್ವೆಲ್ ಸಮೀಪವಿರುವ ವಿದ್ಯುತ್ ಘಟಕದ ಟ್ರಾನ್ಸ್ಫಾರ್ಮರ್ಗಳಿಗೆ ಬೆಂಕಿ ವ್ಯಾಪಿಸಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಈ ಸಂಬಂಧ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.